ಹೈದರಾಬಾದ್ ಮೇಲೆ ರಾಜಸ್ಥಾನ್ ಗೆ `ರಾಯಲ್ಸ್‍’ ಗೆಲುವು IPL: rajastan royals beat hydrabad by 61 runs

ಹೈದರಾಬಾದ್ ಮೇಲೆ ರಾಜಸ್ಥಾನ್ ಗೆ `ರಾಯಲ್ಸ್‍’ ಗೆಲುವು

0

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡ 61 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡ ಆಘಾತ ನೀಡಿದೆ. ಈ ಮೂಲಕ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಪೂನಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಗೆ 149 ರನ್ ಗಳಿಸಲಷ್ಟೇ ಶಕ್ತವಾಯಿತು.

ರಾಜಸ್ಥಾನ್ ತಂಡದ ಸಂಘಟಿತ ದಾಳಿಗೆ ತತ್ತರಿಸಿದ ಸನ್ ರೈಸರ್ಸ್ ಹೈದರಾಬಾದ್ ಒಂದು ಹಂತದಲ್ಲಿ 78 ರನ್ ಗೆ 6 ವಿಕೆಟ್ ಕಳೆದುಕೊಂಡು ತತ್ತರಿಸಿತು. ಮಧ್ಯಮ ಕ್ರಮಾಂಕದಲ್ಲಿ ಏಡಿನ್ ಮಕರಮ್ ಮತ್ತು ವಾಷಿಂಗ್ಟನ್ ಸುಂದರ್ 7ನೇ ವಿಕೆಟ್ ಗೆ 55 ರನ್ ಜೊತೆಯಾಟ ನಿಭಾಯಿಸಿದರು.

ಮಕರಮ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 57 ರನ್ ಗಳಿಸಿದರೆ, ಸುಂದರ್ 14 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 40 ರನ್ ಬಾರಿಸಿದರು. ರೊಮಾರಿಯೊ ಶೆಪಾರ್ಡ್ (24) ರನ್ ಗಳಿಸಿದರು.

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ 3 ವಿಕೆಟ್ ಕಬಳಿಸಿದರೆ, ಟ್ರೆಂಟ್ ಬೌಲ್ಟ್ ಮತ್ತು ಪ್ರಸಿದ್ಧ ಕೃಷ್ಣ ತಲಾ 2 ವಿಕೆಟ್ ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ ನಾಯಕ ಸಂಜು ಸ್ಯಾಮ್ಸನ್ (55), ದೇವದತ್ ಪಡಿಕ್ಕಲ್ (41), ಜೋಸ್ ಬಟ್ಲರ್ (35), ಶಿರ್ಮೊನ್ ಹೆಟ್ಮೆಯರ್ (32) ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು.

Spread the love
Leave A Reply

Your email address will not be published.

Flash News