Breakingದೇಶ-ವಿದೇಶ

ಶ್ರೀಲಂಕಾದಲ್ಲಿ 36 ಗಂಟೆ ನಿಷೇದಾಜ್ಞೆ ಜಾರಿ, ಇಂಟರ್ ನೆಟ್ ಬಂದ್! Social Media Blocked, Curfew In Sri Lanka As Protests Spread

ಆರ್ಥಿಕ ದಿವಾಳಿತದಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಪ್ರತಿಭಟನೆ ಹತ್ತಿಕ್ಕಲು 36 ಗಂಟೆಗಳ ನಿಷೇದಾಜ್ಞೆ ಜಾರಿಗೊಳಿಸಿದ ಬೆನ್ನಲ್ಲೇ ಅಲ್ಲಿನ ಸರಕಾರ ಇಂಟರ್ ನೆಟ್ ಸೇವೆ ರದ್ದುಗೊಳಿಸಿದೆ.

ಶ್ರೀಲಂಕಾ ಅಧ್ಯಕ್ಷ ಗೊತಾಬಯ ರಾಜಪಕ್ಸೆ ಶನಿವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು. ಇದರ ಹೊರತಾಗಿಯೂ ನಾಗರಿಕರು ಪ್ರತಿಭಟನೆ ಮುಂದುವರಿಸಿದ್ದರಿಂದ ಸೋಮವಾರದವರೆಗೆ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂಟರ್ ನೆಟ್ ಸೇವೆ ರದ್ದುಗೊಳಿಸಲಾಗಿದೆ.

ಅಧ್ಯಕ್ಷರ ನಿವಾಸದ ಎದುರು ಪ್ರತಿಭಟನೆ ಹಿಂಸಾರೂಪ ಪಡೆದಿರುವ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನೆಗಿಳಿದರೆ ಕಠಿಣ ಸೆಕ್ಷನ್ ಅಡಿ ಜೈಲಿಗೆ ಹಾಕಲಾಗುವುದು ಎಂದು ಸರಕಾರ ಎಚ್ಚರಿಸಿದೆ.

Spread the love

Related Articles

Leave a Reply

Your email address will not be published.

Back to top button
Flash News