ಐಪಿಎಲ್-2022: ಬಟ್ಲರ್ ಚೊಚ್ಚಲ ಶತಕ; ಮುಂಬೈಗೆ ರಾಜಸ್ಥಾನ್ ಆಘಾತ IPL: buttler century, mumbai losses agenest rajastan

ಐಪಿಎಲ್-2022: ಬಟ್ಲರ್ ಚೊಚ್ಚಲ ಶತಕ; ಮುಂಬೈಗೆ ರಾಜಸ್ಥಾನ್ ಆಘಾತ

0

ಆರಂಭಿಕ ಜೋಸ್ ಬಟ್ಲರ್ ಸಿಡಿಸಿದ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 23 ರನ್ ಗಳಿಂದ ಸೋಲಿಸಿದೆ.

ಅಹಮದಾಬಾದ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ 20 ಓವರ್ ಗಳಲ್ಲಿ 8 ವಿಕೆಟ್ ಗೆ 193 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಗೆ 170 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಸತತ 2 ಗೆಲುವಿನೊಂದಿಗೆ 4 ಅಂಕ ಸಂಪಾದಿಸಿದ್ದೂ ಅಲ್ಲದೇ ರನ್ ಸರಾಸರಿಯಲ್ಲಿ ಮೇಲುಗೈ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಮುಂಬೈ ಇಂಡಿಯನ್ಸ್ ಆರಂಭಿಕ ಎರಡೂ ಪಂದ್ಯಗಳಲ್ಲೂ ಸೋಲುಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿಯಿತು.

ಕಠಿಣ ಗುರಿ ಬೆಂಬತ್ತಿದ ಮುಂಬೈ ಇಂಡಿಯನ್ಸ್ ಆರಂಭದಿಂದಲೇ ಸತತ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಆದರೆ ಆರಂಭಿಕ ಇಶಾನ್ ಕಿಶನ್‍ ಮತ್ತು ತಿಲಕ್ ವರ್ಮಾ ಅರ್ಧಶತಕಗಳನ್ನು ಸಿಡಿಸಿದ್ದೂ ಅಲ್ಲದೇ ಮೂರನೇ ವಿಕೆಟ್ ಗೆ 81 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಆಧರಿಸಿದರು.

ಇಶಾನ್ ಕಿಶನ್ 43 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 54 ರನ್ ಗಳಿಸಿದರು. ತಿಲಕ್ 33 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಸಹಾಯದಿಂದ 61 ರನ್ ಸಿಡಿಸಿ ನಿರ್ಗಮಿಸಿದರು. ಇವರಿಬ್ಬರು ಔಟಾಗುತ್ತಿದ್ದಂತೆ ತಂಡ ನಾಟಕೀಯ ಕುಸಿತ ಅನುಭವಿಸಿ ಸೋಲಿಗೆ ಶರಣಾಯಿತು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ರಾಜಸ್ಥಾನ್ ತಂಡ ಪ್ರಸಕ್ತ ಸಾಲಿನ ಚೊಚ್ಚಲ ಶತಕ ಸಿಡಿಸಿದ ಜೋಸ್ ಬಟ್ಲರ್ ಆಟದಿಂದ ಬೃಹತ್ ಮೊತ್ತ ದಾಖಲಿಸಿತು. ಬಟ್ಲರ್ 68 ಎಸೆತಗಳಲ್ಲಿ 11 ಬೌಂಡರಿ ಮತ್ತು 5 ಸಿಕ್ಸರ್ ಸಹಾಯದಿಂದ ಬರೋಬ್ಬರಿ 100 ರನ್ ಗಳಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ನಾಯಕ ಸಂಜು ಸ್ಯಾಮ್ಸನ್ (30) ಮತ್ತು ಹೆಟ್ಮೆಯರ್ (35) ತಕ್ಕಮಟ್ಟಿಗೆ ಪ್ರದರ್ಶನ ನೀಡಿದರು.

Spread the love
Leave A Reply

Your email address will not be published.

Flash News