ಕಾರು ಅಪಘಾತದಲ್ಲಿ ಬಾಲಿವುಡ್ ನಟಿ ಮಲೈಕಾ ಅರೋರಾಗೆ ಗಾಯ
ಕಾರು ಅಪಘಾತದಲ್ಲಿ ಬಾಲಿವುಡ್ ನಟಿ ಮಲೈಕಾ ಅರೋರಾಗೆ ಗಾಯ
ಬಾಲಿವುಡ್ ನಟಿ ಮಲೈಕಾ ಆರೋರಾ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಕಾರು ಅಪಘಾತದಲ್ಲಿ ಮಲೈಕಾ ಅರೋರಾ ಕಣ್ಣಿಗೆ ಗಂಭೀರವಾದ ಗಾಯವಾಗಿದ್ದು, ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಲಾಪುರ್ ಟೋಲ್ ಪ್ಲಾಜಾ ಬಳಿ ಶನಿವಾರ ಮುಂಜಾನೆ ಅಪಘಾತ ಸಂಭವಿಸಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸೋದರಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಮಲೈಕಾ ಅರೋರಾ ಐಟಂ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಜನಪ್ರಿಯರಾಗಿದ್ದು, ಹಲವಾರು ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.