ಐಪಿಎಲ್: ಚೆನ್ನೈ ಸೂಪರ್ ಕಿಂಗ್ಸ್ ಗೆ ಹ್ಯಾಟ್ರಿಕ್ ಸೋಲು IPL 2022: Liam Livingstone Stars With Bat And Ball As PBKS Thrash CSK

ಐಪಿಎಲ್: ಚೆನ್ನೈ ಸೂಪರ್ ಕಿಂಗ್ಸ್ ಗೆ ಹ್ಯಾಟ್ರಿಕ್ ಸೋಲು

0

ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 54 ರನ್ ಗಳ ಭರ್ಜರಿ ಗೆಲುವು ಸಾಧಿಸಿದರೆ, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹ್ಯಾಟ್ರಿಕ್ ಸೋಲಿನ ಆಘಾತಕ್ಕೆ ಒಳಗಾಗಿದೆ.

ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿದೆ. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 18 ಓವರ್ ಗಳಲ್ಲಿ 126 ರನ್ ಗಳಿಸಲಷ್ಟೇ ಶಕ್ತವಾಯಿತು.

ಚೆನ್ನೈ ತಂಡ ಆರಂಭದಲ್ಲೇ 36 ರನ್ ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಶಿವಂ ದುಬೆ 30 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 57 ರನ್ ಗಳಿಸಿ ಔಟಾದರು. ಔಟಾಗುವ ಮುನ್ನ ಮಾಜಿ ನಾಯಕ ಧೋನಿ ಜೊತೆ ಶಿವಂ ದುಬೆ 6ನೇ ವಿಕೆಟ್ ಗೆ 62 ರನ್ ಜೊತೆಯಾಟ ನಿಭಾಯಿಸಿದರು. ಧೋನಿ 28 ಎಸೆತಗಳಲ್ಲಿ ತಲಾ 1 ಬೌಂಡರಿ ಮತ್ತು ಸಿಕ್ಸರ್ ಸೇರಿದಂತೆ 23 ರನ್ ಗಳಿಸಿದರು.

ರಾಹುಲ್ ಚಾಹರ್ 3, ವೈಭವ್ ಅರೋರಾ, ಲಿಯಾಮ್ ಲಿವಿಂಗ್ ಸ್ಟೋನ್ ತಲಾ 2, ಕಾಗಿಸೊ ರಬಡಾ, ಅರ್ಷದೀಪ್ ಸಿಂಗ್, ಒಡಿಯನ್ ಸ್ಮಿತ್ ತಲಾ 1 ವಿಕೆಟ್ ಪಡೆದರು.

Spread the love
Leave A Reply

Your email address will not be published.

Flash News