Breakingcricket

ಐಪಿಎಲ್: ಅವಿಶ್ ದಾಳಿಗೆ ಹೈದರಾಬಾದ್ ಧೂಳೀಪಟ, ಲಕ್ನೋಗೆ ರೋಚಕ ಜಯ IPL 2022: KL Rahul, Avesh Khan Heroics Help LSG Defeat SRH By 12 Runs

ಮಧ್ಯಮ ವೇಗಿ ಆವಿಶ್ ಖಾನ್ ಮಾರಕ ದಾಳಿ ನೆರವಿನಿಂದ ಲಕ್ನೊ ಸೂಪರ್ ಗೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 12 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ.

ಅಹಮದಾಬಾದ್ ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೊ ಸೂಪರ್ ಗೈಂಟ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯ 3 ಓವರ್ ನಲ್ಲಿ 11 ರನ್ ಗೆ 5 ವಿಕೆಟ್ ಕಳೆದುಕೊಂಡು ಸೋಲುಂಡಿತು.

ಹೈದರಾಬಾದ್ ತಂಡ ಆರಂಭದಿಂದಲೇ ನಿಯಮಿತವಾಗಿ ವಿಕೆಟ್ ಕಳೆದುಕೊಂಡಿದ್ದರಿಂದ ತಂಡ ಒತ್ತಡಕ್ಕೆ ಸಿಲುಕಿತು. ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ 30 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 44 ರನ್ ಗಳಿಸಿ ಔಟಾದರೆ, ನಿಕೊಲಸ್ ಪೂರನ್ 24 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 34 ರನ್ ಗಳಿಸಿದ್ದಾಗ ಔಟಾದರು.

ಆವಿಶ್ ಖಾನ್ 4 ವಿಕೆಟ್ ಪಡೆದರೆ, ಸ್ಪಿನ್ನರ್ ಕೃನಾಲ್ ಪಾಂಡ್ಯ ಒಂದೇ ಓವರ್ ನಲ್ಲಿ 2 ವಿಕೆಟ್ ಪಡೆದು ಮಿಂಚಿದರು. ಜೇಸನ್ ಹೋಲ್ಡರ್ ಕೊನೆಯ ಓವರ್ ನಲ್ಲಿ ಗೆಲ್ಲಲು 16 ರನ್ ಬೇಕಿದ್ದಾಗ 3 ವಿಕೆಟ್ ಪಡೆದು ರೋಚಕ ಗೆಲುವಿಗೆ ಕಾರಣವಾದರು.

Spread the love

Related Articles

Leave a Reply

Your email address will not be published.

Back to top button
Flash News