ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ bannanje raja get life term jail
ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಬೆಳಗಾವಿಯ ಕೋಕಾ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಮೂಲದ ಬನ್ನಂಜೆ ರಾಜಾ, ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಬೆಂಗಳೂರಿನ ಅಭಿ ಬಂಡಗಾರ್, ಉಡುಪಿಯ ಗಣೇಶ್ ಭಜಂತ್ರಿ, ಉಡುಪಿಯ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ 2013ರ ಡಿಸೆಂಬರ್ 21 ರಂದು ಉದ್ಯಮಿ ಆರ್.ಎನ್. ನಾಯಕ್ ಅವರನ್ನು 3 ಕೋಟಿ ಹಫ್ತಾ ನೀಡಲಿಲ್ಲ ಎಂದು ಹತ್ಯೆ ಮಾಡಲಾಗಿತ್ತು.