ಇನ್ನೊಂದು ವಾರ ಸಿಎಂ ಯಾವ್ದೇ ಸಭೆ-ಸಮಾರಂಭದಲ್ಲೂ ಪಾಲ್ಗೊಳ್ಳೊಲ್ಲ.

0

ಬೆಂಗಳೂರು: ಗೃಹ ಕಚೇರಿ ಕೃಷ್ಣಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಸೆಲ್ಫ್ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿದ್ದಾರೆ.ಕೃಷ್ಣಾ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವುದರಿಂದ ಇಂದಿನಿಂದ ಕನಿಷ್ಠ ಒಂದು ವಾರ ತಮ್ಮ  ಮನೆಯಲ್ಲಿ ಉಳಿಯಲು ತೀರ್ಮಾನ ಮಾಡಿದ್ದಾರೆ.ಈ ಬಗ್ಗೆ ಅಧೀಕೃತವಾಗಿ ಸಿಎಂ ಕಚೇರಿನೇ ಮಾಹಿತಿಯನ್ನು ಪ್ರಕಟಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಅವರು, ಮನೆಯಲ್ಲಿ ಉಳಿದು ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ.ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ.ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು.ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿ ಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ತನ್ನ ಸುತ್ತ ಮುತ್ತಲಿನವರಿಗೆ ಕೊರೋನಾ ಪಾಸಿಟಿವ್ ಆಗಿರೋದ್ರಿಂದ  ಒಂದು ವಾರ ಸೆಲ್ಫ್ ಕ್ವಾರಂಟೇನ್ ನಲ್ಲಿರಲು ನಿರ್ಧರಿಸಿದ್ದಾರೆ.ಇದರಿಂದಾಗಿ ಅವರು  ಸಭೆ ಹಾಗೂ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಡೌಟ್. ಅಗತ್ಯಬಿದ್ದರೆ ಮನೆಯಲ್ಲೇ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ ನಡೆಸಲು ಚಿಂತಿಸಿದ್ದಾರೆ ಎನ್ನಲಾಗಿದೆ.

Spread the love
Leave A Reply

Your email address will not be published.

Flash News