ESI ಆಸ್ಪತ್ರೆಯಲ್ಲಿ 54 ಕೊರೊನಾ ರೋಗಿಗಳ ಸಾವು:ತನಿಖೆಗೆ ಸಮಿತಿ ರಚನೆ

0

ಬೆಂಗಳೂರು:ಬೆಂಗಳೂರಿನ ರಾಜಾಜಿನಗರದ ಇ.ಎಸ್. ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಮರಣ ಪ್ರಮಾಣ ಹೆಚ್ಚಳವಾಗಿರೋದು ಸರ್ಕಾರವನ್ನೇ ಬೆಚ್ಚಿಬೀಳಿಸಿದೆ.ವಾಸ್ತವದಲ್ಲಿ ಅಗುತ್ತಿರುವುದೇನು ಎನ್ನುವುದರ ಬಗ್ಗೆ ತನಿಖೆ ನಡೆಸೊಕ್ಕೆ  ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ.

ಇಎಸ್ ಐ ಆಸ್ಪತ್ರೆಗೆ ಈ ಹಿನ್ನಲೆಯಲ್ಲಿ ಇಂದು ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಕೊರೊನಾ ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸೆ, ಇತರೆ ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ಸಾವುಗಳ ಬಗ್ಗೆ ಸೂಕ್ತ ಸ್ಪಷ್ಟನೆ ಸಿಗಬೇಕಿದೆ ಎಂದರು.

ಈವರೆಗು  421 ಕೊರೊನಾ ರೋಗಿಗಳು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆ ಪೈಕಿ 54 ಕೊರೊನಾ ರೋಗಿಗಳು ಮೃತಪಟ್ಟಿದ್ದು, ಮರಣ ಪ್ರಮಾಣ ಶೇ.12.8 ರಷ್ಟಿದೆ ಎಂದು ಸಚಿವರಿಗೆ ವೈದ್ಯಾಧಿಕಾರಿಗಳು ವಿವರಿಸಿದರು.ಆ ವೇಳೆ ಮರಣ ಪ್ರಮಾಣವನ್ನು ಕೇಳಿ ಕೊಂಚ ಗಾಬರಿಯಾದ ಸಚಿವರು ಈ ರೀತಿ ಮರಣ ಹೆಚ್ಚಳವಾಗಲು ಕಾರಣ ಪತ್ತೆ ಮಾಡಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚಿಸಬೇಕು ಎಂದರು.

ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ಇನ್ನೂ ಹಲವು ರೋಗಿಗಳು ತಡವಾಗಿ ಬಂದು ದಾಖಲಾಗಿದ್ದಾರೆ. ಹೀಗಾಗಿ ಮರಣ ಪ್ರಮಾಣ ಹೆಚ್ಚಿದೆ. ಮರಣಕ್ಕೆ ಸಂಬಂಧಿಸಿದಂತೆ ಆಡಿಟ್ ವರದಿ ರೂಪಿಸಲು ಆದೇಶಿಸಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ವೈದ್ಯಾಧಿಕಾರಿಗಳು ಹೇಳಿದರು.

“ಇಎಸ್ ಐ ಆಸ್ಪತ್ರೆಯಲ್ಲಿ 494 ಹಾಸಿಗೆಗಳಿದ್ದು, ಸುಮಾರು 150 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದೆ. ಇಬ್ಬರು ರೋಗಿಗಳ ಸ್ಥಿತಿ ಗಂಭೀರವಾಗಿದೆ. 10 ರೋಗಿಗಳು ಐಸಿಯುನಲ್ಲಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಆಸ್ಪತ್ರೆಯಲ್ಲಿ ಮನೆಯ ಆರೈಕೆ ದೊರೆಯುತ್ತಿದೆ ಎಂದು ಅವರು ಶ್ಲಾಘಿಸಿದ್ದಾರೆ. ಪಿಜಿ ವಿದ್ಯಾರ್ಥಿಗಳು ಮತ್ತು ವೈದ್ಯರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

Spread the love
Leave A Reply

Your email address will not be published.

Flash News