ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಟಾಪನೆಗೆ ಗ್ರೀನ್ ಸಿಗ್ನಲ್-ನೋ ಮನರಂಜನೆ-ಮೆರವಣಿಗೆ-ಮೈಕ್ -ನಿಟ್ಟುಸಿರುಬಿಟ್ಟ ಮೂರ್ತಿ ತಯಾರಕರು..

0

ಬೆಂಗಳೂರು:ಸಾರ್ವಜನಿಕ ಸ್ಥಳಗಳಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಟಾಪನೆ ಈ ಬಾರಿ ಇಲ್ಲವೆಂದು ನಿರಾಶರಾಗಿದ್ದ ಜನರಿಗೆ ರಾಜ್ಯ ಸರಕಾರ ಸಂತಸದ ಸುದ್ದಿ ನೀಡಿದೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ   ಪರಿಷ್ಕೃತ ಮಾರ್ಗಸೂಚಿಗಳನ್ನು ರೂಪಿಸಿದೆ. ಅದೆನೆಂದ್ರೆ  ಹೊಸ ಮಾರ್ಗಸೂಚಿಯಂತೆ ,  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ  ಸರಕಾರದ ಅನುಮತಿ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪಿಸುವವರು ಗರಿಷ್ಟ ನಾಲ್ಕು ಅಡಿ ಹಾಗೂ ಮನೆಗಳಲ್ಲಿ ಗಣೇಶ ಮೂರ್ತಿ ಕೂರಿಸುವವರು  ಕನಿಷ್ಟ ೨ ಅಡಿ ವರೆಗೂ ಗಣೇಶ ಮೂರ್ತಿ ಪ್ರತಿಷ್ಟಾಪಿಸಬಹುದಾಗಿದೆ.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು
ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್
ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್

ಸಾರ್ವಜನಿಕ ಮೂರ್ತಿ ಪ್ರತಿಷ್ಟಾಪನೆ ವೇಳೆ ೨೦ ಜನಕ್ಕೆ ಸೀಮಿತವಾದ ಆವರಣ ನಿರ್ಮಾಣ, ಒಮ್ಮೆಲೆ ೨೦ ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಷರತ್ತು ವಿಧಿಸಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಗೌರಿ ಗಣೇಶ ಮೂರ್ತಿ ಕೂರಿಸುವವರು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನ ಪಡೆಯಬೇಕು. ಹಾಗೆಯೇ ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದೇ ಗೌರಿ ಗಣೇಶ ಮೂರ್ತಿ ಪ್ರತಿಷ್ಟಾಪಿಸುವಂತೆ ಸರಕಾರ ಜನರಲ್ಲಿ ಮನವಿ ಮಾಡಿದೆ. ಆದರೆ ಹಬ್ಬದ ವೇಳೆ ಯಾವುದೇ ಸಾಂಸ್ಕೃತಿಕ, ಮನರಂಜನಾ ಕಾರ್ಯ ಕ್ರಮ ಆಯೋಜನಗೆ ಅವಕಾಶ ನಿರಾಕರಿಸಲಾಗಿದೆ. ಗಣೇಶ ಮೂರ್ತಿ ಮೆರವಣಿಗೆಗೂ ಕೂಡ ನಿರ್ಬಂಧ ಹೇರಲಾಗಿದೆ.

ಮನೆಯಲ್ಲೇ ಗಣೇಶ ಮೂರ್ತಿ ಇಟ್ಟವರು ಮನೆಯಲ್ಲೇ ಮೂರ್ತಿಯನ್ನ ವಿಸರ್ಜಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ  ಗೌರಿ ಗಣೇಶ ಮೂರ್ತಿ ಪ್ರತಿಷ್ಟಾಪಿಸುವವರು  ಸ್ಥಳೀಯ ಆಡಳಿತ ಮಂಡಳಿ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿ ಪಡಿಸಿರುವ ಅಥವಾ ಗುರುತು ಪಡಿಸಿರುವ ಹೊಂಡಾ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕ್ ಗಳಲ್ಲಿ ವಿಸರ್ಜನೆ ಮಾಡಬಹುದಾಗಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟರ್ ನಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಉತ್ಸವ ಆಚರಣೆಗೆ ಷರತ್ತುಬದ್ಧ ಅವಕಾಶ ನೀಡಿರುವುದು ಜನರಲ್ಲಿ ಹಾಗೂ ಗಣೇಶ ಮೂರ್ತಿ ವ್ಯಾಪಾರಿಗಳ ಸಂತೋಷಕ್ಕೆ ಕಾರಣವಾಗಿದೆ. ಈಗಾಗಲೇ ಗಣೇಶ ಮಂಡಳಿಗಳು, ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಗೌರಿಗಣೇಶ ಪ್ರತಿಷ್ಟಾಪಿಸಲು ಯೋಜನೆಯನ್ನ ರೂಪಿಸಿಕೊಂಡಿವೆ. ಇನ್ನೂ ವ್ಯಾಪಾರ ಅಭಾದಿಂದ ಸಂಕಷ್ಟಕ್ಕೆ ಸಿಲಿಕಿದ್ದ ಗಣೇಶ ಮೂರ್ತಿ ತಯಾರಕರು ಸರಕಾರದ ಹೊಸ ಮಾರ್ಗ ಸೂಚಿಯಿಂದ ನಿಟ್ಟುಸಿರು ಬಿಟ್ಟು, ಹೆಚ್ಚಿನ ವ್ಯಾಪಾರದ ನಿರೀಕ್ಷೆಯಲಿದ್ದಾರೆ.

Spread the love
Leave A Reply

Your email address will not be published.

Flash News