CORONA VIRUSKANNADAFLASHNEWSFIGHTAGAINSTCORONAMoreTop NewsUncategorizedಕ್ರೈಮ್ /ಕೋರ್ಟ್ಜಿಲ್ಲೆರಾಜಕೀಯ

ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು ಪ್ರಕರಣ : ತನಿಖೆಗೆ ಸಚಿವ ಡಾ.ಕೆ. ಸುಧಾಕರ್ ಆದೇಶ

ಚಿಕ್ಕಾಬಳ್ಳಾಪುರ:ಕಾರವಾರ ಆಸ್ಪತ್ರೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಸಂತಾನಹರಣ ಶಸ್ತ್ರಚಿಕಿತ್ಸಾ ವೇಳೆ ಮಹಿಳೆ ಸಾವನ್ನಪ್ಪಿದ್ದು ಅತ್ಯಂತ ದುರಾದೃಷ್ಟಕರ.  ಯಾವ ಕಾರಣಕ್ಕೆ ಸಾವಾಗಿದೆ ಎಂಬುದು ತನಿಖೆಯಿಂದಷ್ಟೇ ಹೊರಬರಬೇಕು. ಈಗಾಗಲೇ ಇಲಾಖೆ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ.

ಒಂದು ವೇಳೆ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು, ಮರಣೋತ್ತರ ಪರೀಕ್ಷಾ ವರದಿ ಕೈಸೇರುವವರೆಗೂ ಯಾರ ಮೇಲೂ ಆಪಾದನೆ ಮಾಡಲಾಗದು. ಆದರೆ ಮಹಿಳೆ ಸಾವಿನ ಬಗ್ಗೆ ಕನಿಕರವಿದೆ. ಅವರ ಕುಟುಂಬಕ್ಕೆ ಆರ್ಥಿಕ ನೆರವು ಸಿಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ ಎಂದರು.

ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ಅನಸ್ತೇಷಿಯ ಪ್ರಮಾಣ ಅಧಿಕವಾದಾಗ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇದರಲ್ಲಿ ಲೋಪವಾಗಿದೆಯೇ ಎಂಬುದು ತನಿಖೆಯಿಂದಷ್ಟೇ ದೃಢವಾಗಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸರ್ಜನ್ ವಿರುದ್ಧ ಎಸ್‌ಪಿ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ., ಮೆಡಿಕಲ್ ನಿರ್ಲಕ್ಷ್ಯದ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸುವಂತಿಲ್ಲ. ವೈದ್ಯ ಸಮೂಹ ಇದರಿಂದ ಗಾಬರಿ ಆಗುವ ಅವಶ್ಯಕತೆ ಇಲ್ಲ. ಈ ಪ್ರಕರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.

Spread the love

Related Articles

Leave a Reply

Your email address will not be published.

Back to top button
Flash News