CORONA VIRUSKANNADAFLASHNEWSFIGHTAGAINSTCORONAMoreTop NewsUncategorizedಕ್ರೈಮ್ /ಕೋರ್ಟ್ಜಿಲ್ಲೆರಾಜಕೀಯರಾಜ್ಯ-ರಾಜಧಾನಿ

ಡ್ರಗ್ಸ್ ನಲ್ಲಿ ನನ್ನ ಹೆಸರನ್ನು ತಂದಿದ್ದಾನೆ ಸಂಬರಗಿ- ಶಾಸಕ ಜಮೀರ್  ದೂರು ಆರೋಪ-ದೂರು ದಾಖಲು

ಬೆಂಗಳೂರು:ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ದನಿ ಎತ್ತಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಖಾನ್ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಪ್ರಶಾಂತ್ ಸಂಬರ್ಗಿ ವಿನಾಃ ಕಾರಣ ನನ್ನ ಹೆಸರು ತಂದಿದ್ದಾರೆ.ಆದರೆ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಪ್ರಶಾಂತ್ ಸಂಬರಗಿ ನನ್ನ ಮೇಲೆ ಮಾಡಿರುವ ಆರೋಪದಿಂದ ನನಗೆ ಮಾನ ಹಾನಿಯಾಗಿದೆ.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನಹಾನಿ ಪ್ರಕರಣವನ್ನು ದಾಖಲಿಸುತ್ತಿದ್ದೇನೆ. ಪ್ರಶಾಂತ್ ಸಂಬರ್ಗಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಅಂತ ಜಮೀರ್ ಅಹ್ಮದ್ ಖಾನ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.

ಜಮೀರ್ ಅಹ್ಮದ್ ಖಾನ್ ನೀಡಿರುವ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸರು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ವಿರುದ್ಧ ಎನ್.ಸಿ.ಆರ್ ದಾಖಲಿಸಿಕೊಂಡಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News