BreakingScroll

ಸ್ವಚ್ಛತಾಯೋಧರ(ಪೌರಕಾರ್ಮಿಕರನನ್ನು) ನೆನೆದ ಮಾಜಿ ಸಿಎಂ ಕುಮಾರಸ್ವಾಮಿ

ಇಂದು ಪೌರ ಕಾರ್ಮಿಕ ದಿನಾಚರಣೆ.ನಗರವನ್ನು ಸುಂದರ  ಹಾಗೂ ಆರೋಗ್ಯಪೂರ್ಣ ಮತ್ತು ಸ್ವಚ್ಛವಾಗಿಡುವುದರಲ್ಲಿ ಪೌರ ಕಾರ್ಮಿಕರ ಪಾತ್ರ ಹಿರಿದಾದುದು.ಅವರನ್ನು ನೆನೆಯುವ ದಿನ ಇದು.ಈ ಹಿನ್ನಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅಭಿನಂದನೆ ಹಾಗೂ ಶುಭಾಷಯ ಸಲ್ಲಿಸಿದ್ದಾರೆ.

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ.

ಕೊರೋನಾ ಸಂಕಷ್ಟದ ಈ ದಿನಗಳಲ್ಲಿ ಜನರ ಆರೋಗ್ಯದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರು ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ.ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು. ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ.

Spread the love

Related Articles

Leave a Reply

Your email address will not be published.

Back to top button
Flash News