ದೌರ್ಜನ್ಯ ಸಂತ್ರಸ್ಥರಿಗೆ ಉದ್ಯೋಗ ನಿರಾಕರಿಸಿದ್ರೆ ಹುಷಾರ್..ಸಿಎಂ ಖಡಕ್ ಎಚ್ಚರಿಕೆ

0

ಬೆಂಗಳೂರು: ದೌರ್ಜನ್ಯ ಪ್ರತಿಬಂಧ ಅಧಿನಿಯಮದಲ್ಲಿ ನಿಗಧಿಯಾಗಿರುವ ಶಿಕ್ಷೆ ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದಂತಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳು  ಎಫ್..ಆರ್. ದಾಖಲಿಸಬೇಕು ಮತ್ತು ಸಂಬಂಧಿಸಿದ ಸೆಕ್ಷನ್ಗಳನ್ನು ಅನುಮೋದಿಸಬೇಕು.   60 ದಿನಗಳೊಳಗೆ ತನಿಖೆ ಮುಗಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲೇಬೇಕು, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಜಾಗರೂಕತೆ ವಹಿಸಬೇಕು. ಅಲ್ಲದೇ ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂಬ ಆದೇಶಗಳನ್ನು ಸಿಎಂ ಕಟ್ಟುನಿಟ್ಟಾಗಿ ನೀಡಿದ್ದಾರೆ.

ರಾಜ್ಯದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ. 5 ರಿಂದ 6 ರಷ್ಟಿವೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸುವ ಸಂದರ್ಭವನ್ನೂ ವಿಡಿಯೋ ರೆಕಾರ್ಡಿಂಗ್ ಮಾಡಲು ಕ್ರಮ ವಹಿಸಬೇಕು. ಪ್ರಸ್ತುತ ದೌರ್ಜನ್ಯ ಪ್ರತಿಬಂಧ ಅಧಿನಿಯಮದ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಪಂಚನಾಮೆ ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ವಿಡಿಯೋ ರೆಕಾರ್ಡಿಂಗ್ ನಡೆಸಲಾಗುತ್ತಿದೆ. ದೂರು ಸಲ್ಲಿಸಲು ಬಂದ ಸಂತ್ರಸ್ತರ ಹಾದಿ ತಪ್ಪಿಸುವ ಸಾಧ್ಯತೆಗಳನ್ನು ತಪ್ಪಿಸಲು ದೂರು ನೀಡುವ ಸಂದರ್ಭದಲ್ಲಿಯೂ ವಿಡಿಯೋ ರೆಕಾರ್ಡಿಂಗ್ ನಡೆಸುವಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡುವಂತೆ  ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ/ ಪಂಗಡಗಳ ಕಾಲೋನಿಗಳಲ್ಲಿ, ತಾಂಡಾ ಗಳಲ್ಲಿ ಕನಿಷ್ಠ 100 ಪಡಿತರ ಚೀಟಿದಾರರು ಇದ್ದಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸುವ ಕುರಿತು  ಕ್ರಮ ಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಪಟ್ಟ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಧನವನ್ನು ನೀಡಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ 30 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದ್ದು, ಪೈಕಿ 15 ಕೋಟಿ ರೂ.ಗಳ ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ದೌರ್ಜನ್ಯಕ್ಕೆ ಒಳಗಾದವರಿಗೆ ನಿಗದಿತ ಸಮಯದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದಲ್ಲದೆ ಭಾರತ ಸರ್ಕಾರದ ಡಾ. ಅಂಬೇಡ್ಕರ್ ಫೌಂಡೇಷನ್ ವತಿಯಿಂದ ನೀಡಲಾಗುವ ಪರಿಹಾರ ಒದಗಿಸಲು ಸಹ ಅಧಿಕಾರಿಗಳು ಕ್ರಮ ವಹಿಸಬೇಕು  ಸಂತ್ರಸ್ತರಿಗೆ ಉದ್ಯೋಗ ನೀಡುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಗಳಿಗೆ ತಿರಸ್ಕರಿಸಿದ್ರೆ ಪರಿಣಾಮ ನೆಟ್ಟಗಿರೊಲ್ಲ ಎಂದು ಎಚ್ಚರಿಸಿದ್ದಾರೆ. 

Spread the love
Leave A Reply

Your email address will not be published.

Flash News