ಬಿಡಿಎ ಅಧ್ಯಕ್ಷರಾಗಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ

0

ಬೆಂಗಳೂರು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ(BDA)ದ  ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕಗೊಂಡಿದ್ದಾರೆ.ಮುಖ್ಯಮಂತ್ರಿಗಳ ಬಳಗದ ಅತ್ಯಾಪ್ತರಲ್ಲಿ ಗುರುತಿಸಿಕೊಂಡಿರುವ ವಿಶ್ವನಾಥ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸನ್ನಿವೇಶದಲ್ಲಿ ಪೈಪೋಟಿಗೆ ಬೀಳದೆ ತಾಳ್ಮೆ ವಹಿಸಿದ್ದಕ್ಕೆ ಯಡಿಯೂರಪ್ಪ ವಿಶ್ವನಾಥ್ ಅವರಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನದ ಜೊತೆಗೆನೇ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ.ನಾಳೆ ವಿಶ್ವನಾಥ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬಿಡಿಎಯನ್ನು ಲಾಭದತ್ತ ಕೊಂಡೊಯ್ದು ಜನಸ್ನೇಹಿಗೊಳಿಸುವ ದೊಡ್ಡ ಜವಾಬ್ದಾರಿ ವಿಶ್ವನಾಥ್ ಮೇಲಿದೆ.

Spread the love
Leave A Reply

Your email address will not be published.

Flash News