ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,531 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. 403 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 8,344 ಜನರಿಗೆ ಸೋಂಕು ಪತ್ತೆಯಾಗಿದ್ದು ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಎರಡನೇ ಅಲೆ ಕೊರೋನಾ ಅಲೆ ಸೋಂಕು ರಾಜ್ಯದಲ್ಲಿ ನಿಯಂತ್ರಣ ಮೀರಿದೆ. ಜನತಾ ಕರ್ಫ್ಯೂನಡುವೆಯೋ ಸೋಂಕು ನಿಯಂತ್ರಣವಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ಸರಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ.