IPL 2021: ಮುಂಬೈvs ಚೆನ್ನೈ ಬದ್ಧವೈರಿಗಳ ಕಾದಾಟಕ್ಕೆ ಕೌಂಟ್ ಡೌನ್ ಸ್ಟಾರ್ಟ್..
ಐಪಿಎಲ್ 14ನೇ ಆವೃತ್ತಿಯ ಬಹುನಿರೀಕ್ಷಿತ ಪಂದ್ಯದಲ್ಲಿ ಐಪಿಎಲ್ನ ಅತ್ಯಂತ ಯಶಸ್ವಿ ತಂಡಗಳು ಮುಖಾಮುಖಿಯಾಗಲಿವೆ. 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿ ಚಾಂಪಿಯನ್ ಚೆನ್ನೈ ಸೂಪರ್ಕಿಂಗ್ಸ್ ನಡುವಿನ ಸಮರಕ್ಕೆ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.