ರಾಷ್ಟ್ರಧ್ವಜಕ್ಕೆ 21 ಬಾರಿ ಸೆಲ್ಯೂಟ್ ಮಾಡಲು ಯುವಕನಿಗೆ ಶಿಕ್ಷೆ!

ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುತ್ತಾ 21 ಬಾರಿ ಭಾರತದ ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಹೊಡೆಯುವಂತೆ ಮಧ್ಯಪ್ರದೇಶದ ಹೈಕೋರ್ಟ್ ಗೆ 21 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಿದೆ. ಫೈಜಲ್ ಖಾನ್ ಅಲಿಯಾಸ್ ಫೈಜಾನ್ ದೇಶದ್ರೋಹಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ನಡೆಯುವವರೆಗೂ ತಿಂಗಳಲ್ಲಿ ಎರಡು ಬಾರಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವಂತೆ ಸೂಚಿಸಿದೆ. ಮಂಗಳವಾರ ಪೊಲೀಸ್ ಠಾಣೆಗೆ ಆಗಮಿಸಿದ ಫೈಜಲ್ ಖಾನ್ ಅಲಿಯಾಸ್ … Read more

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ … Read more

ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ … Read more

CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ  ಪ್ರತ್ಯೇಕ ಪಕ್ಷಗಳ  ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ … Read more

MAJOR OPERATION IN TV9 KANNADA DIGITAL…!? TV-9 ಕನ್ನಡ ಡಿಜಿಟಲ್ ಟೀಮ್ ನ 8 ಉದ್ಯೋಗಿಗಳ ಕೆಲಸಕ್ಕೆ ಕುತ್ತು..?! “ಮನಿ-9” ಬಳಿಕ “ಡಿಜಿಟಲ್” ಗೆ ಆಪರೇಷನ್..?!

ಬೆಂಗಳೂರು: ಇದು ಕನ್ನಡದ ನಂಬರ್ 1 ನ್ಯೂಸ್ ಚಾನೆಲ್ ಡಿಜಿಟಲ್ ವಿಭಾಗದ ಆಡಳಿತ  ಅಮಾಯಕ ಹಾಗು ಪ್ರಾಮಾಣಿ ಕ  ಸಿಬ್ಬಂದಿಯನ್ನು ಅಮಾನವೀಯವಾಗಿ ನಡೆಸಿಕೊಂಡಿದೆ ಎನ್ನಲಾದ ನೋವಿನ ಕಥೆ.?  ವರ್ಷಗಳಿಂದಲೂ  ಕೆಲಸ ಮಾಡುತ್ತಿದ್ದವರನ್ನು ಏಕಾಏಕಿ, ನಾಳೆಯಿಂದ ನಿಮ್ಮ ಸೇವೆ ನಮಗೆ ಅಗತ್ಯವಿಲ್ಲ,ಕೆಲಸಕ್ಕೆ ಬರಬೇಡಿ ಎಂದ್ಹೇಳಿಬಿಟ್ಟರೆ ತಮ್ಮ ಕಸುವನ್ನೆಲ್ಲಾ ಒಗ್ಗೂಡಿಸಿ ಕೆಲಸ ಮಾಡಿದ ಸಿಬ್ಬಂದಿಯ ಸ್ಥಿತಿ ಹೇಗಾಗಬೇಡ. ಅವರ ವೃತ್ತಿಜೀವನ-ಸಮಾಜದಲ್ಲಿ ಕಾಯ್ದುಕೊಂಡ ಘನತೆ-ಪ್ರತಿಷ್ಠೆ, ವೈಯುಕ್ತಿಕ ಜೀವನ, ಹೆಂಡತಿ ಮಕ್ಕಳು… ಸಾಲ,ಇನ್ ಸ್ಟಾಲ್ಮೆಂಟ್.. ಹೀಗೆ ಕೆಲಸ ನಂಬಿಕೊಂಡು ಮೈ ತುಂಬಾ ಮಾಡಿಕೊಂಡ … Read more

ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ಇಷ್ಟ ಇಲ್ವಾ?: ಸುಪ್ರೀಂಕೋರ್ಟ್ ಪ್ರಶ್ನೆ

ಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಮಾಜವಾದ ಮತ್ತು ಜಾತ್ಯತೀಯ ಭಾರತ ಸಂವಿಧಾನದ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಈ ಹಿಂದೆ ಹಲವಾರು ಬಾರಿ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದು ಹೇಳಿತು. ನ್ಯಾಯಮೂರ್ತಿ ಸಂಜೀವ್ … Read more

ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ನಿಂದ ಸ್ಪರ್ಧೆ?

ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ ನೀಡುವ ಮೂಲಕ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಕುತೂಹಲ ಘಟ್ಟ ತಲುಪಿದೆ. ಚನ್ನಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು. ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದ ಬೆನ್ನಲ್ಲೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಸ್ಪೀಕರ್ ಭೇಟಿ ಮಾಡಿ ಸೋಮವಾರವೇ ರಾಜೀನಾಮೆ ಸಲ್ಲಿಸುವ … Read more

ಇರಾನ್ ಮೇಲೆ ಯುದ್ಧಕ್ಕೆ ಇಸ್ರೇಲ್ ಸೇನೆ ಸಜ್ಜು: ಅಮೆರಿಕ ರಹಸ್ಯ ದಾಖಲೆ ಸೋರಿಕೆ!

ಇರಾನ್ ಮೇಲೆ ಯುದ್ಧ ಸಾರಲು ಇಸ್ರೇಲ್ ಸೇನಾ ಸಿದ್ಧತೆ ಆರಂಭಿಸಿದ್ದು, ಯಾವುದೇ ಕ್ಷಣದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಅತ್ಯಂತ ರಹಸ್ಯ ದಾಖಲೆ ಸೋರಿಕೆಯಾಗಿದೆ. ಅಮೆರಿಕದ ಅತ್ಯಂತ ಬಲಿಷ್ಠ ಗುಪ್ತಚರ ಸಂಸ್ಥೆಯಾದ ನ್ಯಾಷನಲ್ ಜಿಯೊಸ್ಪೆಟಲ್ ಇಂಟಲಿಜೆನ್ಸ್ ಏಜೆನ್ಸಿ (ಎನ್ ಜಿಎ) ನಮಗೆ ಅಮೆರಿಕದ ಗುಪ್ತಚರ ಸ್ಯಾಟಲೈಟ್ ಗಳು ಸಂಗ್ರಹಿಸಿದ ಛಾಯಾಚಿತ್ರಗಳ ವಿಮರ್ಶೆ ಮಾಡಲಾಗುತ್ತಿದ್ದು, ಇಸ್ರೇಲ್ ಸೇನಾ ತರಬೇತಿ ಆರಂಭಿಸಿದ್ದು, ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ತಿಳಿಸಿದೆ. ಅಕ್ಟೋಬರ್ … Read more

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊ ಡೆಲಿವರಿ ಕಂಪನಿಗಳ ವಿರುದ್ಧ ತನಿಖೆಗೆ ಆಗ್ರಹ

ಜೊಮೊಟೊದ ಬ್ಲಿಂಕಿಟ್, ಜೆಪ್ಟೊ, ಸ್ವಿಗ್ಗಿ ಸಂಸ್ಥೆಗಳು ಫುಡ್ ಡೆಲಿವರಿ ವಿಧಿಸುತ್ತಿರುವ ಶುಲ್ಕದ ಬಗ್ಗೆ ತನಿಖೆ ನಡೆಸಬೇಕು ಎಂದು ದೇಶದ ಅತೀ ದೊಡ್ಡ ಚಿಲ್ಲರೆ ಸಾಗಾಟದಾರರ ಒಕ್ಕೂಟ ಭಾರತೀಯ ಸ್ಪರ್ಧಾತ್ಮಕ ಆಯೋಗವನ್ನು ಆಗ್ರಹಿಸಿದೆ. ಆಹಾರ ಧಾನ್ಯಗಳಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳನ್ನು ಕೇವಲ 10 ನಿಮಿಷದಲ್ಲಿ ತಲುಪಿಸುತ್ತೇವೆ ಎಂಬ ಭರವಸೆ ನೀಡುವ ಡೆಲಿವರಿ ಕಂಪನಿಗಳು ಖರೀದಿ ವ್ಯವಸ್ಥೆಯನ್ನೇ ಬದಲಿಸಿವೆ. ಅಮೆಜಾನ್ ಕಂಪನಿ ಇ-ಕಾಮರ್ಸ್ ಕಾಲಿಟ್ಟ ನಂತರ ಪ್ರತಿಯೊಂದು ವಸ್ತುಗಳು ಮನೆ ಬಾಗಿಲಿಗೆ ಡೆಲಿವರಿ ನೀಡುತ್ತಿವೆ. ನೆಸ್ಟ್ಲೆ, ಹಿಂದೂಸ್ತಾನ್ ಯುನಿಲಿವರ್ ನಂತಹ … Read more

ನ್ಯೂಜಿಲೆಂಡ್ ವನಿತೆಯರ ಟಿ-20 ಚಾಂಪಿಯನ್: ದ.ಆಫ್ರಿಕಾಗೆ 32 ರನ್ ಸೋಲು

ನ್ಯೂಜಿಲೆಂಡ್ ತಂಡ 32 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡ ವಿರುದ್ಧ ಸುಲಭ ಜಯ ಸಾಧಿಸಿ ವನಿತೆಯರ ಟಿ-20 ಚಾಂಪಿಯನ್ ಆಗಿ ಹೊರಹೊಮ್ಮಿದೆ. ಓಮನ್ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 129 ರನ್ ಗಳಿಸಲಷ್ಟೇ ಶಕ್ತವಾಯಿತು. … Read more