bbmp

ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬಿಬಿಎಂಪಿ!

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಿಬಿಎಂಪಿ ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ​​ ತುಷಾರ್ ಗಿರಿನಾಥ್, ‘ಗಣೇಶನ ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೇ ನಿರ್ಬಂಧವಿಲ್ಲ.  24 ಗಂಟೆಯೊಳಗೆ ಅನುಮತಿ ಕೊಡಲು ಆಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಈಗಾಗಲೇ ಪಿಒಪಿ ಗಣೇಶಗಳನ್ನ ಸೀಜ್ ಮಾಡಲಾಗಿದೆ. ಕಳೆದ ಬಾರಿ 5 ಅಡಿ ಗಣೇಶ ಮೂರ್ತಿಗಷ್ಟೇ ಅನುಮತಿ ಕೊಡಲಾಗಿತ್ತು. ಈ ಬಾರಿ ಬೆಂಗಳೂರಲ್ಲಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಗಣೇಶನ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಗಣೇಶ ವಿಸರ್ಜನೆ ಮಾಡುವ 42 ಕೆರೆ, ಕಲ್ಯಾಣಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು. ಕಲ್ಯಾಣಿ ಬಳಿ‌ ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ ನಿಲುಗಡೆಗೆ ಸೂಚಿಸಿದ್ದು, ಬೆಂಗಳೂರು ನಗರದ ಮನೆ ಮನೆ ಗಣಪನ ವಿಸರ್ಜನೆಗೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಬೆಸ್ಕಾಂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು.

ಈ ಕುರಿತು ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *