advertise here

Search

ಧೋನಿ ಅಭಿಮಾನಿಗಳಿಗೆ ಬಿಗ್‌ ಶಾಕ್: ಮೊದಲ ಎರಡು ವಾರ ಐಪಿಎಲ್‌ನಿಂದ ಧೋನಿ ಔಟ್!

 ms dhoni ruled out

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ (Ms dhoni) ಅವರು ಕಾಲಿನ ಸ್ನಾಯು ಸೆಳೆತದಿಂದ (Calf Strain) ಬಳಲುತ್ತಿದ್ದು, ಟೂರ್ನಿಯ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಬಿದ್ದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಇಂದು (ಶನಿವಾರ) ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದೆ. “ಎಂ.ಎಸ್. ಧೋನಿ ಅವರು ಪ್ರಸ್ತುತ ಕಾಲಿನ ಸ್ನಾಯು ಸೆಳೆತಕ್ಕೆ ಸಂಬಂಧಿಸಿದಂತೆ ಪುನಶ್ಚೇತನ (Rehabilitation) ಶಿಬಿರದಲ್ಲಿದ್ದಾರೆ. ಈ ಕಾರಣದಿಂದಾಗಿ ಅವರು ಟಾಟಾ ಐಪಿಎಲ್ 2026ರ ಮೊದಲ ಎರಡು ವಾರಗಳ ಕಾಲ ಮೈದಾನದಿಂದ ಹೊರಗುಳಿಯುವ ಸಾಧ್ಯತೆಯಿದೆ. ಥಲಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇವೆ” ಎಂದು ಸಿಎಸ್‌ಕೆ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ತಿಳಿಸಿದೆ.

ಯಾವ ಪಂದ್ಯಗಳನ್ನು ಮಿಸ್ ಮಾಡಲಿದ್ದಾರೆ ಧೋನಿ?

ವರದಿಗಳ ಪ್ರಕಾರ, ಧೋನಿ ಕನಿಷ್ಠ 4 ಪ್ರಮುಖ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಆರಂಭಿಕ ಪಂದ್ಯದ ಜೊತೆಗೆ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. 44 ವರ್ಷದ ಧೋನಿ ಕಳೆದ ಸೀಸನ್‌ನಲ್ಲೂ ಮೊಣಕಾಲು ನೋವಿನ ನಡುವೆಯೇ ಆಡಿದ್ದರು. ಈಗ ಈ ಹೊಸ ಗಾಯವು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ALSO READ :  ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

ಧೋನಿ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಸಿದ್ಧ?

ಧೋನಿ ಅಲಭ್ಯತೆಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಕುರಿತು ಈಗಾಗಲೇ ಚರ್ಚೆ ಶುರುವಾಗಿದೆ. ಕಳೆದ ಹರಾಜಿನ ಸಮಯದಲ್ಲಿ ತಂಡಕ್ಕೆ ಸೇರ್ಪಡೆಯಾಗಿರುವ ಸಂಜು ಸ್ಯಾಮ್ಸನ್ ಅವರು ಧೋನಿ ಬದಲಿಗೆ ವಿಕೆಟ್ ಕೀಪಿಂಗ್ ಗ್ಲೌಸ್ ತೊಡುವುದು ಬಹುತೇಕ ಖಚಿತವಾಗಿದೆ. ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಲ್ಲಿ ಸಂಜು ವಿಕೆಟ್ ಕೀಪಿಂಗ್ ಮಾಡಿದ್ದರೆ, ಧೋನಿ ಕೇವಲ ಬ್ಯಾಟಿಂಗ್‌ಗೆ ಸೀಮಿತವಾಗಿದ್ದರು.

ಇದನ್ನೂ ಓದಿ | ಜನಸಾಮಾನ್ಯರಿಗೆ ಕ್ಯೂ.. ಶಾಸಕರಿಗೆ ವಿಐಪಿ ವ್ಯೂ! ಇದು ‘ಹಸ್ತ’ ಸರ್ಕಾರದ ಅಸಲಿ ಮುಖವೇ?

ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡವು ಕಳೆದ ಬಾರಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಈ ಬಾರಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿರುವ ತಂಡಕ್ಕೆ ‘ಫಿನಿಶರ್’ ಧೋನಿ ಅವರ ಗಾಯವು ಆರಂಭಿಕ ಹಂತದಲ್ಲಿ ಭಾರಿ ಹೊಡೆತ ನೀಡಿದೆ. ಧೋನಿ ಅವರ ಫಿಟ್‌ನೆಸ್ ಕುರಿತು ‘ರೋರ್ 26’ ಫ್ಯಾನ್ ಈವೆಂಟ್‌ನಲ್ಲಿ ಸ್ವತಃ ಅವರೇ ಮಾತನಾಡುತ್ತಾ, ತಮ್ಮ ಫಿಟ್‌ನೆಸ್ ಮಟ್ಟ ಸ್ವಲ್ಪ ಮಟ್ಟಿಗೆ ಕುಸಿಯುತ್ತಿದೆ ಎಂದು ಒಪ್ಪಿಕೊಂಡಿದ್ದರು. ಇದು ಧೋನಿ ಅವರ ಕೊನೆಯ ಐಪಿಎಲ್ ಆಗಿರಬಹುದು ಎಂಬ ಚರ್ಚೆ ತುಂಬಾ ಜೋರಾಗಿ ಕೇಳಿ ಬರುತ್ತಿದೆ.


Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top