ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು 17 ಸಹಚರರ ವಿರುದ್ಧ ಪೊಲೀಸರು 4500 ಪುಟಗಳ ಚಾರ್ಜ್ ಶೀಟ್ ಸಿದ್ಧಪಡಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ.
ಚಿತ್ರದುರ್ಗದ ರೇಣುಕಾಸ್ವಸಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿಂದ ವಿಚಾರಣೆ ನಡೆಸುತ್ತಿರುವ ಪೊಲೀಸರು ಸುಮಾರು 200ಕ್ಕೂ ಹೆಚ್ಚು ಸಾಕ್ಷ್ಯಗಳು ಹಾಗೂ ಹೇಳಿಕೆಗಳನ್ನು ಸಂಗ್ರಹಿಸಿದ್ದಾರೆ.
ಕೊಲೆ ನಡೆದ ಘಟನೆಯ ವಿವರ, ಕೊಲೆಯಾದ ಸಂದರ್ಭದಲ್ಲಿ ಯಾರೆಲ್ಲಾ ಸ್ಥಳದಲ್ಲಿ ಇದ್ದರು? ಆರೋಪಿಗಳ ಹೇಳಿಕೆ ಹಾಗೂ ಪೂರಕ ಸಾಕ್ಷ್ಯ ಸೇರಿದಂತೆ ಪ್ರತಿಯೊಂದು ಸಾಕ್ಷ್ಯವನ್ನು ವೀಡಿಯೊದಲ್ಲಿ ಸಂಗ್ರಹಿಸಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಿದ್ದಾರೆ.
ದರ್ಶನ್ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿ ಸುಮಾರು 2 ತಿಂಗಳು ಕಳೆಯುತ್ತಾ ಬಂದಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಇದೀಗ ಬಳ್ಳಾರಿ ಜೈಲಿಗೆ ಸ್ಥಳಾಂಯರಿಸಲಾಗಿದೆ.