advertise here

Search

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡ: 10 ರೋಗಿಗಳ ದಾರುಣ ಸಾವು!

cuttack scb medical college

ಕಟಕ್: ಒಡಿಶಾದ ಪ್ರತಿಷ್ಠಿತ ಎಸ್‌ಸಿಬಿ (ಶ್ರೀ ರಾಮಚಂದ್ರ ಭಂಜ್) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದೇ ಈ ಮಹಾ ದುರಂತಕ್ಕೆ ಕಾರಣ ಎನ್ನಲಾಗಿದೆ.

ಸೋಮವಾರ ಮುಂಜಾನೆ ಸುಮಾರು 2:59ರ ಸುಮಾರಿಗೆ ಇಡೀ ನಗರವೇ ಗಾಢ ನಿದ್ರೆಯಲ್ಲಿದ್ದಾಗ, ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಮತ್ತು ದಟ್ಟ ಹೊಗೆ ಇಡೀ ವಾರ್ಡ್ ಅನ್ನು ಆವರಿಸಿಕೊಂಡಿತು. ಆ ಸಮಯದಲ್ಲಿ ಐಸಿಯುವಿನಲ್ಲಿ ಸುಮಾರು 15 ಜನ ರೋಗಿಗಳು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಟ್ಟ ಹೊಗೆಯಿಂದಾಗಿ ರೋಗಿಗಳು ಉಸಿರುಗಟ್ಟುವಂತಾಯಿತು, ಹೊರಗೆ ಓಡಿ ಬರಲಾಗದ ಅಸಹಾಯಕ ಸ್ಥಿತಿಯಲ್ಲಿದ್ದ ರೋಗಿಗಳ ಕಿರುಚಾಟ ಮುಗಿಲು ಮುಟ್ಟಿತ್ತು.

ALSO READ :  ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

ಇದನ್ನೂ ಓದಿ | ಆಸ್ಪತ್ರೆಯಲ್ಲೇ ಅಕ್ರಮದ ಲೂಟಿ: ಡಾ. ಶಿವಲಿಂಗಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಆಸ್ಪತ್ರೆಯ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಈಗ ಗಂಭೀರ ಪ್ರಶ್ನೆಗಳು ಎದ್ದಿವೆ. ಶಾರ್ಟ್ ಸರ್ಕ್ಯೂಟ್ ಸಂಭವಿಸಲು ಕಾರಣವೇನು ಮತ್ತು ಆಸ್ಪತ್ರೆಯಲ್ಲಿ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿದ್ದವೇ ಎಂಬ ಬಗ್ಗೆ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ.


Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top