ಸುದ್ದಿಗೋಷ್ಠಿ ಮಧ್ಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ!

ಸುದ್ದಿಗೋಷ್ಠಿ ಮಧ್ಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ!

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಪಾದಯಾತ್ರೆ ಕುರಿತು ಚರ್ಚೆ ನಡೆಸಲಾಯಿತು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಈ ಘಟನೆ ನಡೆದಿದೆ.

ಎಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುವಾಗ ಪಕ್ಕದಲ್ಲೇ ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ರಕ್ತಸ್ರಾವ ನಿಲ್ಲದ ಕಾರಣ ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿ ಕುಮಾರಸ್ವಾಮಿ ಆಸ್ಪತ್ರೆಗೆ ತೆರಳಿದ್ದಾರೆ. ಕುಮಾರಸ್ವಾಮಿ ಅವರಿಗೆ ಈಗಾಗಲೇ ಶ್ವಾಸಕೋಸ ಮತ್ತು ಹೃದಯ ಸಂಬಂಧಿ ಕಾಯಿಲೆ ಇದ್ದು, ಧೂಳಿನ ಸಮಸ್ಯೆಯಿಂದ ಆಗಿರಬಹುದು ಎಂದು ಶಂಕಿಸಲಾಗಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *