ಆಗಸ್ಟ್ 27ರವರೆಗೂ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಬುಧವಾರ ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ರಾಜಧಾನಿಯಲ್ಲಿ ಉತ್ತಮ ಮಳೆಯಾಗುತ್ತಿದ್ದರೂ ಬಿಸಿಲು ಮತ್ತು ಧಗೆ ಪ್ರಮಾಣ ಮುಂದುವರಿಯಲಿದೆ. ಎಚ್ಎಎಲ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಿದ್ದರೆ, ಕೆಐಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದರೆ 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.