ರಾಜ್ಯದಲ್ಲಿ ಮಂಕಿಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

ರಾಜ್ಯದಲ್ಲಿ ಮಂಕಿಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು  ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಗಸ್ಟ್ 14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ್ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಮಂಕಿಪಾಕ್ಸ್ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್‌ ಮಾಹಿತಿ ನೀಡಿದರು.

“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ ರಾಜ್ಯದಲ್ಲಿ ಮಂಕಿಫಾಕ್ಸ  ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಸಚಿವರು ಹೇಳಿದರು.

ಮಂಕಿಪಾಕ್ಸ್ ವೈರಲ್‌ ಸೋಂಕು ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೂ ಪ್ರಕರಣ ಪತ್ತೆಯಾಗಿಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *