advertise here

Search

ಪೆನ್‌ಡ್ರೈವ್ ಹಗರಣ: 13,712 ಪುಟಗಳ ಬೃಹತ್ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ; 39 ಜನರ ವಿರುದ್ಧ ಸಾಬೀತಾಯ್ತು ಆರೋಪ!

prajwal revanna pen drive

ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು, ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಬರೋಬ್ಬರಿ 13,712 ಪುಟಗಳ ಬೃಹತ್ ದೋಷಾರೋಪ ಪಟ್ಟಿಯನ್ನು (Charge Sheet) ಸಲ್ಲಿಸಿದ್ದಾರೆ.

52 ಜನರ ಹೆಸರು ಉಲ್ಲೇಖ 

ಈ ಸುದೀರ್ಘ ಚಾರ್ಜ್‌ಶೀಟ್‌ನಲ್ಲಿ ಎಸ್‌ಐಟಿ ಒಟ್ಟು 52 ಜನರ ಹೆಸರುಗಳನ್ನು ಉಲ್ಲೇಖಿಸಿದೆ. ತನಿಖೆಯ ವೇಳೆ ಸಂಗ್ರಹಿಸಲಾದ ತಾಂತ್ರಿಕ ಸಾಕ್ಷ್ಯಗಳು, ಸಂತ್ರಸ್ತೆಯರ ಹೇಳಿಕೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ 39 ಜನರ ವಿರುದ್ಧ ಆರೋಪಗಳು ಪ್ರಾಥಮಿಕವಾಗಿ ಸಾಬೀತಾಗಿವೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿದೆ. ಪೆನ್‌ಡ್ರೈವ್ ಸಿದ್ಧಪಡಿಸಿದವರು, ಅದನ್ನು ಸಾರ್ವಜನಿಕವಾಗಿ ಹಂಚಿದವರು ಮತ್ತು ಈ ಸಂಚಿನ ಹಿಂದೆ ಇದ್ದವರ ವಿವರಗಳನ್ನು ದಾಖಲೆ ಸಮೇತ ವಿವರಿಸಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಹಾಸನ ಮತ್ತು ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ನೂರಾರು ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಪೆನ್‌ಡ್ರೈವ್ ವೈರಲ್ ಮಾಡುವುದರ ಹಿಂದೆ ರಾಜಕೀಯ ಉದ್ದೇಶವಿತ್ತೇ ಅಥವಾ ವೈಯಕ್ತಿಕ ದ್ವೇಷವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಾಗಿತ್ತು. ಡಿಜಿಟಲ್ ಫೋರೆನ್ಸಿಕ್ ವರದಿಗಳು ಈ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಮೂಲಗಳು ತಿಳಿಸಿವೆ.

ALSO READ :  ಲೇಡಿಸ್ ಬಾರ್‌ಗಳಿಗೆ ಹೈಕೋರ್ಟ್ 'ಗುಡ್ ನ್ಯೂಸ್': ಮಹಿಳಾ ಸಪ್ಲೈಯರ್‌ಗಳ ಕೆಲಸಕ್ಕೆ ಕಾನೂನು ಮಾನ್ಯತೆ!

ರಾಜಕೀಯ ವಲಯದಲ್ಲಿ ತಲ್ಲಣ

ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ 52 ಜನರ ಪಟ್ಟಿಯಲ್ಲಿ ಹಾಸನದ ಪ್ರಭಾವಿ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರ ಹೆಸರುಗಳೂ ಇವೆ ಎನ್ನಲಾಗಿದೆ. 39 ಜನರ ವಿರುದ್ಧ ಆರೋಪ ಸಾಬೀತಾಗಿರುವುದರಿಂದ, ಮುಂದಿನ ದಿನಗಳಲ್ಲಿ ಇವರಿಗೆ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬೆಳವಣಿಗೆಯು ಹಾಸನ ಜಿಲ್ಲೆಯ ರಾಜಕೀಯ ನಾಯಕರಲ್ಲಿ ಮತ್ತೆ ನಡುಕ ಹುಟ್ಟಿಸಿದೆ.

ಇದನ್ನೂ ಓದಿ | ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಸಹಾಯಕನಿಂದ ಭೂ ಅಕ್ರಮ!

ಪ್ರಜ್ವಲ್ ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಈ ಚಾರ್ಜ್‌ಶೀಟ್ ಹಗರಣದ ಆಳ ಮತ್ತು ವಿಸ್ತಾರವನ್ನು ಬಯಲಿಗೆಳೆದಿದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top