ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ!

ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ!

ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ 1993ರ ಬ್ಯಾಚ್‌ನ ಭಾರತೀಯ ಕಂದಾಯ ಸೇವಾ ಅಧಿಕಾರಿ ರಾಹುಲ್ ನವೀನ್ ನೇಮಕಗೊಂಡಿದ್ದಾರೆ.

ರಾಹುಲ್ ನವೀನ್ ಅಧಿಕಾರ ವಹಿಸಿಕೊಂಡ ದಿನದಿಂದ 2 ವರ್ಷಗಳ ಅವಧಿಗೆ ನಿರ್ದೇಶಕರಾಗಿ ನೇಮಕಗೊಂಡಿದ್ದು, ಮುಂದಿನ ಆದೇಶದವರೆಗೂ ಅವರು ಹುದ್ದೆಯಲ್ಲಿ ಮುಂದುವರಿಯಬಹುದಾಗಿದೆ.

ರಾಹುಲ್ ನವೀನ್ ಭಾರತೀಯ ಕಂದಾಯ ಸೇವೆಯ (ಆದಾಯ ತೆರಿಗೆ) 1993ರ ಬ್ಯಾಚ್ ಅಧಿಕಾರಿ. ರಾಹುಲ್ 2023ರ ಸೆಪ್ಟೆಂಬರ್ 15ರಂದು ತನಿಖಾ ಸಂಸ್ಥೆಯ ಹಾಲಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಿಸುವ ಮೊದಲು, ನವೀನ್ ಸಂಜಯ್ ಮಿಶ್ರಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದರು.

ದೇಶದ 120ಕ್ಕೂ ಹೆಚ್ಚು ರಾಜಕೀಯ ನಾಯಕರನ್ನು ಇಡಿ ತನಿಖೆ ನಡೆಸುತ್ತಿದೆ. ಅದರಲ್ಲಿ ಸುಮಾರು 95 ಪ್ರತಿಶತದಷ್ಟು ಮಂದಿ ವಿರೋಧ ಪಕ್ಷದವರೇ ಆಗಿದ್ದಾರೆ. ರಾಜಕೀಯ ನಾಯಕರ ವಿರುದ್ಧ ತನಿಖೆಗಾಗಿ ಇಡಿ ಆಗಾಗ್ಗೆ ವಿರೋಧ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *