ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಬೆದರಿಕೆ ನಡುವೆಯೂ ಬಿಗ್ ಬಾಸ್ ರಿಯಾಲಿಟಿ ಶೋ ಸೆಟ್ ಬಿಗಿ ಭದ್ರತೆ ನಡುವೆ ಆಗಮಿಸಿ ನಿರೂಪಣೆ ಪುನರಾರಂಭಿಸಿದ್ದಾರೆ.
58 ವರ್ಷದ ಸಲ್ಮಾನ್ ಖಾನ್ ಬಿಗ್ ಬಾಸ್ ನ 18ನೇ ಆವೃತ್ತಿಯಲ್ಲಿ ವೀಕೆಂಡ್ ಕಾರ್ಯಕ್ರಮದ ನಿರೂಪಣೆಗಾಗಿ ಶುಕ್ರವಾರ ಸಂಜೆ 7 ಗಂಟೆಗೆ ಆಗಮಿಸಿದ್ದಾರೆ. ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು 3 ಗಂಟೆಗಳ ಕಾಲ ನಡೆಸಿಕೊಡಲಿದ್ದಾರೆ.
ಸಲ್ಮಾನ್ ಖಾನ್ ಗೆ ಬಿಗ್ ಬಾಸ್ ಸೆಟ್ ನಲ್ಲಿಯೇ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, 60 ಬಾಡಿಗಾರ್ಡ್ ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಕಾರ್ಯಕ್ರಮ ಮುಗಿಯುವವರೆಗೂ ಯಾರೂ ಹೊರಗೆ ಹೋಗುವಂತಿಲ್ಲ ಎಂಬ ನಿಯಮ ರೂಪಿಸಲಾಗಿದೆ.
ಇತ್ತೀಚೆಗೆ ಶಾಸಕ ಬಾಬಾ ಸಿದ್ದಿಕಿ ಹತ್ಯೆ ಮಾಡಿದ್ದ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ಸಲ್ಮಾನ್ ಖಾನ್ ಹತ್ಯೆಯ ಬೆದರಿಕೆ ಹಾಕಿದ್ದು, 5 ಕೋಟಿ ರೂ. ನೀಡುವಂತೆ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಅಲ್ಲದೇ ಈ ಸಂದೇಶವನ್ನು ಹಗುರವಾಗಿ ಪರಿಗಣಿಸದಂತೆ ಎಚ್ಚರಿಕೆ ನೀಡಲಾಗಿದೆ