ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ದಿನಾಂಕವನ್ನು ಘೋಷಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ಎಸ್ ಎಸ್ ಎಲ್ ಸಿ-2 ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಘೋಷಣೆಯಲ್ಲಿರುವಂತೆ ಜೂನ್ 14ರಿಂದ ಪರೀಕ್ಷೆಗಳು ಪ್ರಾರಂಭವಾಗಲಿದ್ದು ಜೂನ್ 22 ರವರೆಗೆ ನಡೆಯಲಿದೆ.
ಇದಕ್ಕು ಮುನ್ನ ಜೂನ್ 7ರಿಂದ 14ರವರೆಗೆ ಎಕ್ಸಾಂ ಎಂದು ಹೇಳಲಾಗಿತ್ತು.ಆದರೆ ಬದಲಾದ ಸನ್ನಿವೇಶದಲ್ಲಿ ಒಂದು ವಾರಕ್ಕೆ ಪರೀಕ್ಷೆ ಮುಂದೂಡಲಾಗಿದೆ.ಅಂದ್ಹಾಗೆ ಜೂನ್ 14 ರಂದು ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 15 : ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಜೂನ್ 18 ರಂದು ಗಣಿತ/ಸಮಾಜ ಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದರೆ, ಜೂನ್ 19 ರಂದು ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ IV, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.
ಇನ್ನು ಜೂನ್ 20 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ ಹಾಗೂ ಜೂನ್ 21 : ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ವಿಷಯಗಳಿಗೆ ಪರೀಕ್ಷೆ ಹಾಗೂ ಜೂನ್ 22 ರಂದು ಕಡೆಯ ಪರೀಕ್ಷೆಗಳು ಸಮಾಜ ವಿಜ್ಞಾನವಿಷಯಕ್ಕೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷಾ ವೇಳಾಪಟ್ಟಿ www.kseab.karnataka.gov.in ರಲ್ಲಿ ಲಭ್ಯವಿರಲಿದೆ.
ಪರೀಕ್ಷಾ ವೇಳಾಪಟ್ಟಿಯ ಹೈಲೈಟ್ಸ್
- ಜೂನ್ 14 : ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
- ಜೂನ್ 15 : ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್,
- ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
- ಜೂನ್ 18 : ಗಣಿತ/ಸಮಾಜ ಶಾಸ್ತ್ರ
- ಜೂನ್ 19: ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ IV, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
- ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
- ಜೂನ್ 21 : ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
- ಜೂನ್ 22 : ಸಮಾಜ ವಿಜ್ಞಾನ