advertise here

Search

ಪಾಕ್ ಆಟಗಾರನ ಖರೀದಿಸಿದ ಸನ್ ರೈಸರ್ಸ್: ಭಾರತದಲ್ಲಿ ಭುಗಿಲೆದ್ದ ಪ್ರತಿರೋಧ

the hundred auction sunrisers

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಐಪಿಎಲ್ ಸೇರಿದಂತೆ ಭಾರತೀಯ ಒಡೆತನದ ತಂಡಗಳು ಪಾಕ್ ಆಟಗಾರರಿಂದ ದೂರವೇ ಉಳಿದಿದ್ದವು. ಆದರೆ, ಲಂಡನ್‌ನಲ್ಲಿ ನಡೆದ ‘ದಿ ಹಂಡ್ರೆಡ್’ (The Hundred 2026) ಟೂರ್ನಿಯ ಹರಾಜಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಒಡೆತನದ ಸನ್ ರೈಸರ್ಸ್ ಲೀಡ್ಸ್ (Sunrisers Leeds) ತಂಡವು ಪಾಕಿಸ್ತಾನದ ಮಿಸ್ಟರಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿದೆ.

ಚೆನ್ನೈ ಮೂಲದ ಸನ್ ಗ್ರೂಪ್, ಇತ್ತೀಚೆಗಷ್ಟೇ ದಿ ಹಂಡ್ರೆಡ್ ಟೂರ್ನಿಯ ಲೀಡ್ಸ್ ಫ್ರಾಂಚೈಸಿಯನ್ನು ಪೂರ್ಣ ಪ್ರಮಾಣದಲ್ಲಿ ತನ್ನದಾಗಿಸಿಕೊಂಡಿತ್ತು. ಗುರುವಾರ ನಡೆದ ಹರಾಜಿನಲ್ಲಿ ಕಾವ್ಯ ಮಾರನ್ ನೇತೃತ್ವದ ಸನ್ ರೈಸರ್ಸ್ ಲೀಡ್ಸ್ ತಂಡವು ಅಬ್ರಾರ್ ಅಹ್ಮದ್ ಅವರನ್ನು 1,90,000 ಪೌಂಡ್ (ಸುಮಾರು 2.34 ಕೋಟಿ ರೂಪಾಯಿ) ನೀಡಿ ಖರೀದಿಸಿತು. 2009ರ ನಂತರ ಭಾರತೀಯ ಮೂಲದ ಮಾಲೀಕತ್ವದ ತಂಡವೊಂದು ಪಾಕಿಸ್ತಾನಿ ಆಟಗಾರನನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿರುವುದು ಇದೇ ಮೊದಲು. ಈ ನಿರ್ಧಾರವು ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಹಳೆಯ ಪೋಸ್ಟ್‌ಗಳೇ ಮುಳುವಾದವಾ?

ಅಬ್ರಾರ್ ಅಹ್ಮದ್ ಖರೀದಿಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಅಬ್ರಾರ್ ಅಹ್ಮದ್ ಅವರ ಹಳೆಯ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಎಂದು ಹೇಳಲಾಗುತ್ತಿದೆ. ಕಳೆದ ವರ್ಷದ ಉದ್ವಿಗ್ನತೆಯ ಸಮಯದಲ್ಲಿ ಅಬ್ರಾರ್ ಅವರು ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ಅಭಿಮಾನಿಗಳು, ಅಂತಹ ಆಟಗಾರನಿಗೆ ಭಾರತೀಯ ಕಂಪನಿಯು ಹಣ ನೀಡುವುದು ದೇಶಪ್ರೇಮಕ್ಕೆ ವಿರುದ್ಧವಾದುದು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ALSO READ :  ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಇದನ್ನೂ ಓದಿ | ಗಿಲ್ ವರ್ಷದ ಕ್ರಿಕೆಟಿಗ; ದ್ರಾವಿಡ್, ಮಿಥಾಲಿಗೆ ಜೀವಮಾನ ಸಾಧನೆ ಪ್ರಶಸ್ತಿ!

ಈ ಬಗ್ಗೆ ತಂಡದ ಮೂಲಗಳು ಅಥವಾ ಮಾಲೀಕರು ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಹರಾಜಿಗೆ ಮುನ್ನ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಎಲ್ಲಾ ತಂಡಗಳಿಗೆ ಸೂಚನೆಯೊಂದನ್ನು ನೀಡಿತ್ತು. ಆಟಗಾರರ ಆಯ್ಕೆಯು ಕೇವಲ ಅವರ ಸಾಮರ್ಥ್ಯ, ಲಭ್ಯತೆ ಮತ್ತು ತಂಡದ ಅಗತ್ಯತೆಗಳ ಮೇಲೆ ಇರಬೇಕೇ ಹೊರತು ರಾಷ್ಟ್ರೀಯತೆಯ ಮೇಲೆ ಅಲ್ಲ ಎಂದು ಸ್ಪಷ್ಟಪಡಿಸಿತ್ತು. ಆಸ್ಟ್ರೇಲಿಯಾದ ಆಟಗಾರರ ಸಲಹೆಯ ಮೇರೆಗೆ ಮುಖ್ಯ ತರಬೇತುದಾರ ಡೇನಿಯಲ್ ವೆಟ್ಟೋರಿ ಅವರು ಅಬ್ರಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.


Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top