ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

              ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ … Read more

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ

ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ … Read more

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ … Read more

ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ … Read more

ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾದ ಗೌರಿ ಲಂಕೇಶ್ ಹತ್ಯೆಯ ಆರೋಪಿ!

ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ 2001ರಿಂದ 2008ರ ಅವಧಿಯಲ್ಲಿ ಶಿವಸೇನೆಯ ಜಲ್ನಾ ವಾರ್ಡ್ ಪಾಲಿಕೆ ಸದಸ್ಯರಾಗಿದ್ದರು. 2017. ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪೊಲೀಸರು ಬಂಧಿಸಿದ್ದರು. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆದ ಶ್ರೀಕಾಂತ್ ಪಂಗಾರ್ಕರ್ ಮಾಜಿ ಸಚಿವ ಅರ್ಜುನ್ ಖೋಡ್ಕರ್ ನೇತೃತ್ವದಲ್ಲಿ … Read more

1988ರ ನಂತರ ಮೊದಲ ಬಾರಿ ಭಾರತದಲ್ಲಿ ಗೆಲುವು ದಾಖಲಿಸಿದ ನ್ಯೂಜಿಲೆಂಡ್! ಭಾರತಕ್ಕೆ 8 ವಿಕೆಟ್ ಸೋಲು!

ನ್ಯೂಜಿಲೆಂಡ್ ತಂಡ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್ ಗಳಿಂದ ಭಾರತ ತಂಡವನ್ನು ಸೋಲಿಸಿ ಭಾರತದ ನೆಲದಲ್ಲಿ 36 ವರ್ಷಗಳ ನಂತರ ಮೊದಲ ಗೆಲುವಿನ ದಾಖಲೆ ಬರೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 107 ರನ್ ಸುಲಭ ಗುರಿ ಪಡೆದಿದ್ದ ನ್ಯೂಜಿಲೆಂಡ್ ತಂಡ ಪಂದ್ಯದ 5ನೇ ಹಾಗೂ ಅಂತಿಮ ದಿನವಾದ ಭಾನುವಾರ ಭೋಜನ ವಿರಾಮಕ್ಕೂ ಮುನ್ನವೇ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೆ ವಿಲ್ … Read more

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ ಅರೆಸ್ಟ್: ಎಂಪಿ ಸೀಟು ಕೊಡಿಸ್ತೀನಿ ಅಂತ 2 ಕೋಟಿ ವಂಚನೆ!

ಲೋಕಸಭೆಗೆ ಟಿಕೆಟ್ ಕೊಡಿಸ್ತೀನಿ ಎಂದು 2 ಕೋಟಿ ರೂ. ಬೇಡಿಕೆ ಇಟ್ಟ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸೋದರ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಷಿ ಅವರನ್ನು ಶನಿವಾರ ಹುಬ್ಬಳ್ಳಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋಪಾಲ ಜೋಷಿ … Read more

ಬೆಂಗಳೂರು ಟೆಸ್ಟ್: ಸರ್ಫರಾಜ್ ಚೊಚ್ಚಲ ಶತಕ, ಕಿವೀಸ್ ಗೆ 107 ರನ್ ಗುರಿ

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಸಿದ ಚೊಚ್ಚಲ ಶತಕದ ಹೊರತಾಗಿಯೂ ಭಾರತ ತಂಡ ನಾಟಕೀಯ ಕುಸಿತ ಅನುಭವಿಸಿದೆ. ಇದರಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಗೆಲ್ಲಲು 107 ರನ್ ಗಳ ಸುಲಭ ಸವಾಲೊಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ 3 ವಿಕೆಟ್ ಗೆ 231 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೂ ಮುನ್ನವೇ 462 ರನ್ ಗೆ ಆಲೌಟಾಗಿದೆ. … Read more

ಕಿಲಾರಿ ಬೊಮ್ಮಯ್ಯ, ರಾಜಶೇಖರ, ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಭಾಗ: ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ ( ಜಾನುವಾರುಗಳ ಸಂರಕ್ಷಣೆ)  ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ.  ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ … Read more

ಬೆಂಗಳೂರು ಟೆಸ್ಟ್: 46 ರನ್ ಗೆ ಆಲೌಟಾದ ಭಾರತ ತವರಿನಲ್ಲಿ ಕಳಪೆ ದಾಖಲೆ!

ನ್ಯೂಜಿಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ 46 ರನ್ ಗೆ ಆಲೌಟಾಗಿದೆ. ತವರಿನಲ್ಲಿ ಭಾರತ ತಂಡ ದಾಖಲಿಸಿದ ಅತ್ಯಂತ ಕಳಪೆ ಮೊತ್ತವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯಿಂದ ಮೊದಲ ದಿನದಾಟ ರದ್ದಾಗಿದ್ದರಿಂದ ಪಂದ್ಯದ ಎರಡನೇ ದಿನವಾದ ಗುರುವಾರ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 31.2 ಓವರ್ … Read more