ತಲಕಾವೇರಿಯಲ್ಲಿ ಉದ್ಭವಿಸಿದ ಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

ಕೊಡಗು ಜಿಲ್ಲೆಯ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವಿಸಿದ್ದು ಭಕ್ತಾದಿಗಳಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು. ತಲಕಾವೇರಿ ಪುಣ್ಯಕ್ಷೇತ್ರದ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷೆಯಂತೆ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭ ಆಯಿತು. ಮೂರು ಬಾರಿ ಉಕ್ಕಿ ಬಂದ ಕಾವೇರಿ ಭಕ್ತರಿಗೆ ಕಾಣಿಸಿಕೊಂಡಿದ್ದು, ನೆರೆದಿರುವ ಭಕ್ತರಿಗೆ ಬ್ರಹ್ಮಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಮಂಡ್ಯ, ಮೈಸೂರು, ಹಾಸನ ಅಲ್ಲದೇ ರಾಜ್ಯದ ನಾನಾ ಕಡೆಗಳಿಂದ ಹಾಗೂ ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳದಿಂದ ಸಹಸ್ರ ಸಂಖ್ಯೆಯಲ್ಲಿ … Read more

ಮಹತ್ವಾಕಾಂಕ್ಷಿ `ಕಾವೇರಿ 5ನೇ ಹಂತದ ಯೋಜನೆ’ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು … Read more