ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

Election Commission

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಅಕ್ರಮಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ದಾಖಲೆ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬರೋಬ್ಬರಿ 650 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಹಾಗೂ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ … Read more

ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಸಂಡೂರು ಕ್ಷೇತ್ರದಲ್ಲಿ ಈ.ತುಕರಾಮ್ ಲೋಕಸಭೆಯಲ್ಲಿ ಜಯ … Read more

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ನ.20 ಮತದಾನ, 23ರಂದು ಫಲಿತಾಂಶ

ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ಘೋಷಣೆ ಮಾಡಿದೆ. ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್ ನ 82 ಸ್ಥಾನಗಳಿಗೆ ಎರಡು … Read more