ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ

ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ. ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ ಘಟನೆ ನಡೆದ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಜೆಡ್-ಮಾರ್ಥ್ ಸುರಂಗದ ಕಾಮಗಾರಿ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಘಾತ ವ್ಯಕ್ತಪಡಿಸಿದ್ದು, ನಾಗರಿಕರ … Read more

2 ಗಂಟೆಯಲ್ಲಿ 21 ಕಿ,ಮೀ. ಮ್ಯಾರಥಾನ್ ಓಡಿದ ಜಮ್ಮು ಕಾಶ್ಮೀರ ಸಿಎಂ!

ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಯಾವುದೇ ತರಬೇತಿ ಇಲ್ಲದಿದ್ದರೂ ಮ್ಯಾರಥಾನ್ ನಲ್ಲಿ 2 ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಭಾನುವಾರ ಹಮ್ಮಿಕೊಂಡಿದ್ದ ಮ್ಯಾರಥಾನ್ ನಲ್ಲಿ 13 ದೇಶಗಳಿಂದ 2000ಕ್ಕೂ ಅಧಿಕ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇದು ಕಣಿವೆ ರಾಜ್ಯದಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಮಟ್ಟದ ಮ್ಯಾರಥಾನ್ ಆಗಿದೆ. 54 ವರ್ಷದ ಓಮರ್ ಅಬ್ದುಲ್ಲಾ ಸ್ವತಃ ಈ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದೂ ಅಲ್ಲದೇ 2 ಗಂಟೆಯಲ್ಲಿ 21 ಕಿ.ಮೀ. ದೂರ … Read more

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ: ಹೊಸ ಸರ್ಕಾರ ರಚನೆಗೆ ಸಿದ್ಧತೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ 10 ವರ್ಷಗಳಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ಭಾನುವಾರ ಅಂತ್ಯಗೊಂಡಿದೆ. ಇತ್ತೀಚೆಗೆ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಅಂತ್ಯಗೊಂಡಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆಯುವ ಬಗ್ಗೆ ಭಾನುವಾರ ಅಧಿಸೂಚನೆ ಹೊರಡಿಸಿದೆ. ಸಂವಿಧಾನದ ನಿಯಮ 239 ಮತ್ತು 239ಎ ಅನ್ವಯ ಕೇಂದ್ರ ಸರ್ಕಾರ ಹೊರಡಿಸಿದ್ದ ಕೇಂದ್ರಾಡಳಿತ ಪ್ರದೇಶದ ಆದೇಶ 2019, ಅಕ್ಟೋಬರ್ 31ರಂದು ರದ್ದಾಗಲಿದೆ. ಆದರೆ … Read more