ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ ಅರೆಸ್ಟ್: ನಾಲ್ವರು ಯುವತಿಯರ ರಕ್ಷಣೆ!

ಈವೆಂಟ್ ಮ್ಯಾನೇಜ್ ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಬೆಂಗಳೂರಿನ ಪಟ್ಟೆಗಾರಪಾಳ್ಯ ನಿವಾಸಿ ಪ್ರಕಾಶ್ ಹಾಗೂ ಪತಿ ಪಾರಿಜಾತ ಬಂಧಿತ ದಂಪತಿ. ರಾಕೇಶ್ ಮತ್ತು ಪೂಜಾ ಎಂದು ಹೆಸರು ಬದಲಿಸಿಕೊಂಡಿದ್ದ ಆರೋಪಿಗಳು ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನ ವೇಶ್ಯಾವಾಟಿಕೆ ಅಡ್ಡೆಗೆ ತಳ್ಳುತ್ತಿದ್ದರು. ಉತ್ತರ ಕರ್ನಾಟಕ ಮೂಲದ ಬಡ ಹೆಣ್ಣು ಮಕ್ಕಳನ್ನ ಬೆಂಗಳೂರಿಗೆ ಕರೆತಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸುತ್ತಿದ್ದರು. ಕರ್ನಾಟಕದ ಯುವತಿಯರನ್ನು ತಮಿಳುನಾಡು, … Read more

ಖಾಸಗಿ ಸಂಸ್ಥೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಬೇಕು ಹಾಗೂ ಕನ್ನಡ ಸಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆದರೆ ಖಾಸಗಿ ಕಂಪನಿಗಳಲ್ಲಿ ಅದರಲ್ಲೂ ಐಟಿ-ಬಿಟಿ ಕಂಪನಿಗಳಲ್ಲಿ … Read more

ಕೋವಿಡ್ ಅಕ್ರಮ ತನಿಖೆಗೆ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ತೀರ್ಮಾನ

ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ಅಬ್ಬರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ಕುರಿತು ತನಿಖೆಯನ್ನು ಸಂಪುಟ ಉಪ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು. ಕೋವಿಡ್ ಕಾಲದಲ್ಲಿ ಪಿಪಿಟಿ ಕಿಟ್, ಎಸಿ, ಮಾಸ್ಕ್ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದು, … Read more