ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ … Read more

ಮಳೆ ನಿರ್ವಹಣೆ ಹೆಸರಲ್ಲಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ದುರ್ಬಳಕೆ?

ಬೆಂಗಳೂರಿನಲ್ಲಿ ಮಳೆಯಾದರೆ ಜನರು ಪರದಾಡುತ್ತಿದ್ದರೆ, ಬಿಬಿಎಂಪಿ ಅಧಿಕಾರಿಗಳು ಖುಷಿಯಿಂದ ತೇಲಾಡುತ್ತಿರುತ್ತಾರೆ. ಇದಕ್ಕೆ ಕಾರಣ ಸರಕಾರದಿಂದ ಬರುವ ಹಣ ಹೊಡೆಯಬಹುದಲ್ವಾ ಅಂತ! ಹೌದು, ಬೆಂಗಳೂರಿನಲ್ಲಿ ಸಣ್ಣ ಮಳೆಯಾದರೂ ಸಮಸ್ಯೆಗಳು ಕಂಡು ಬರುತ್ತವೆ. ಚರಂಡಿಗಳು ತುಂಬಿ ಹರಿದು ರಸ್ತೆಯೆಲ್ಲಾ ಜಲಾವೃತಗೊಳ್ಳುತ್ತವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗುತ್ತದೆ. ಆದರೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಸಿಬ್ಬಂದಿ ಏನೋ ಕೆಲಸ ಮಾಡುತ್ತಿರುವಂತೆ ಗಡಿಬಿಡಿಯಲ್ಲಿ ಓಡಾಡುತ್ತಿರುತ್ತಾರೆ. ಆದರೆ ಯಾವ ಕೆಲಸವೂ ಮಾಡುವುದಿಲ್ಲ. ಅದರಲ್ಲೂ ಶಾಶ್ವತ ಪರಿಹಾರವಂತೂ ಕಾಣುವುದಿಲ್ಲ. ಇದರಿಂದ ಬೆಂಗಳೂರಿನ ಸಮಸ್ಯೆ ಬಗೆಹರಿಯುವುದೇ … Read more

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ … Read more