advertise here

Search

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!


ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು  ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು ಸೆಳೆದಿರುವುದಾಗಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ALSO READ :  PLEASE ALLOW TO X'MAS MIDNIGHT HOLY MASS..."ಮಧ್ಯರಾತ್ರಿ" ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ಉಪಚುನಾವಣೆ ಎದುರಿಸಲು ಸಿದ್ಧ

ರಾಜ್ಯದಲ್ಲಿ ನಡೆಯುವ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದರು.


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top